ವಿಟ್ಲ: ವಿದ್ಯಾರ್ಥಿಗಳು ವಿದ್ಯಾರ್ಥಿ ಧರ್ಮವನ್ನು ಪಾಲಿಸಿದಾಗ ,ಅವರು ಯಶಸ್ಸನ್ನು ಸಾರ್ಥಕತೆಯನ್ನು ಪಡೆಯುತ್ತಾರೆ. ನಮ್ಮ ನಮ್ಮ ವೈಯಕ್ತಿಕ ಧsರ್ಮ ಮತಗಳು ನಮ್ಮ ಮನೆಗಳಿಗೆ ಸೀಮಿತಗೊಳಿಸಿ ಸಾರ್ವಜನಿಕವಾಗಿ ಬರುವಾಗ ವಿದ್ಯಾರ್ಥಿ ಜೀವನಕ್ಕೆ ಹೆಚ್ಚಿನ ಒತ್ತನ್ನು ಕೊಡುವುದು ಒಳ್ಳೆಯದು. ಇದರಿಂದ ಎಲ್ಲರಿಗೂ ಹಿತವಾಗುತ್ತದೆ’ ಎಂದು ವಿಟ್ಲ ಪಟ್ಟಣ ಪಂಚಾಯತಿನ ಅಧ್ಯಕ್ಷ ಅರುಣ ವಿಟ್ಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇವರು ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ.ಶೀ.ವಿಶ್ವನಾಥ ಅಧ್ಯಕ್ಷತೆ ವಹಿಸಿದ್ದರು. ಕೋಶಾzಧಿಕಾರಿ ನಿತ್ಯಾನಂದ ನಾಯಕ್ ಸದಸ್ಯರಾದ ಜಾನ್ ಡಿಸೋಜ ಮುಖ್ಯ ಅಥಿತಿಗಳಾಗಿ ಉಪಸ್ಥಿತರಿದ್ದರು. ಪ್ರಾಂಶುಪಾಲರು ಸ್ವಾಗತಿಸಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ನ್ಯಾಕ್ಸನ್ ಡಿಸೋಜ, ಉಪಾಧ್ಯಕ್ಷರಾಗಿ ರೋಹಿತ್, ಕಾರ್ಯದರ್ಶಿಯಾಗಿ ಸ್ವಾತಿ ಕೆ ಹಾಗೂ ಭಾಗ್ಯಶ್ರೀ ಜತೆಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ನ್ಯಾಕ್ಸನ್ ಡಿಸೋಜ ವಂದಿಸಿದರು. ವಿದ್ಯಾರ್ಥಿನಿ ಅಂಕಿತಾ ಯನ್ ಕಾರ್ಯಕ್ರಮ ನಿರೂಪಿಸಿದರು.

