ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಬಿಜೆಪಿ ಬಹುಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದರೆ ಅದರ ಹಿಂದೆ ಕಾರ್ಯಕರ್ತರ ಪರಿಶ್ರಮ ಬಹಳಷ್ಟಿದೆ. ಗೆಲುವಿನೊಂದಿಗೆ ನಮ್ಮ ಜವಾಬ್ದಾರಿಯೂ ಹೆಚ್ಚಾಗಿದೆ. ಮುಂದಿನ ಸ್ಥಳೀಯಾಡಳಿತ ಚುನಾವಣೆಯನ್ನು ಎದುರಿಸಲು ಕೂಡ ಈಗಲೇ ಸಿದ್ಧತೆ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ಕರೆ ನೀಡಿದ್ದಾರೆ.

IMG_2509

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಪ್ರತಾಪ್ಸಿಂಹ ನಾಯಕ್ ಅಧ್ಯಕ್ಷತೆಯಲ್ಲಿ ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿಯ ಕಾರ್ಯಕ್ರಮಗಳಾಗಬೇಕು. ಜನತೆ ವಿಶ್ವಾಸವಿಟ್ಟು ಅಭ್ಯಥರ್ಿಗಳನ್ನು ಚುನಾಯಿಸಿದ್ದಾರೆ. ವಿಶ್ವಾಸಕ್ಕೆ ಧಕ್ಕೆಯಾಗದಂತೆ ಉತ್ತಮ ಕೆಲಸಗಳಾಗಬೇಕು. ಈ ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮ ಕೂಡ ಅತ್ಯಗತ್ಯ. ಸರಕಾರದ ಯೋಜನೆಗಳನ್ನು ಜನತೆಗೆ ತಿಳಿಸುವುದರೊಂದಿಗೆ ಜನರ ಸಮಸ್ಯೆಗೂ ಸ್ಪಂದಿಸಬೇಕು. ಇದರ ಜೊತೆಗೆ ಮುಂದಿನ ಸ್ಥಳೀಯಾಡಳಿತ ಚುನಾವಣೆಗೂ ಸಿದ್ಧರಾಗಬೇಕು ಎಂದರು.
ರಾಜ್ಯ ಉಪಾಧ್ಯಕ್ಷ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ `ಏಕ್ ಭಾರತ್ ಶ್ರೇಷ್ಠ್ ಭಾರತ್’ ಕಲ್ಪನೆಗೆ ಜನರು ಸ್ಪಂದಿಸಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಕಾರ್ಯಕರ್ತರು ಜನರ ಮಧ್ಯೆ ಸಂಪರ್ಕದೊಂದಿಗೆ ಇದ್ದು ನರೇಂದ್ರ ಮೋದಿಯವರ ಕನಸನ್ನು ನನಸು ಮಾಡುವಲ್ಲಿ ಮಹತ್ತರದ ಪಾತ್ರವನ್ನು ವಹಿಸಬೇಕಾಗಿದೆ ಎಂದರು.
ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಪ್ರತಾಪ್ಸಿಂಹ ನಾಯಕ್, ಚುನಾವಣೆ ಗೆಲುವಿಗೆ ಸಹಕರಿಸಿದ ಸರ್ವರನ್ನು ಅಭಿನಂದಿಸಿದರು.
ಬಿಜೆಪಿ ಕಾಳಜಿ ವಹಿಸಿತ್ತು
ರಾಜ್ಯದಲ್ಲಿ ಬಿಜೆಪಿ ಅಧಿಕಾರವಿದ್ದ ಸಂದರ್ಭ ಸರಕಾರಿ ಸ್ಥಳದಲ್ಲಿ ಅನೇಕ ವರ್ಷಗಳಿಂದ ವಾಸದ ಮನೆಯನ್ನು ನಿಮರ್ಿಸಿಕೊಂಡು ಇರುವವರಿಗೆ ಹಕ್ಕುಪತ್ರವನ್ನು ನೀಡುವ ಕಾಯ್ದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿ ರಾಜ್ಯಪಾಲರ ಸಹಿಗೆ ಕಳುಹಿಸಿತ್ತು. ಆದರೆ ಆ ಸಮಯದಲ್ಲಿ ಕಾಂಗ್ರೆಸ್ನ ಕುತಂತ್ರದಿಂದ ರಾಜ್ಯಪಾಲರು ಸಹಿ ಮಾಡದೆ ವಿಳಂಬ ಮಾಡಿದ್ದರು. ಬಿಜೆಪಿ ಕಾಳಜಿ ವಹಿಸಿದ್ದ ಆ ಕಾರ್ಯಕ್ರಮ ಇದೀಗ ಅನುಷ್ಠಾನಗೊಳ್ಳುತ್ತಿದೆ. ಜನತೆಗೆ ಇದನ್ನು ಮನವರಿಕೆ ಮಾಡಬೇಕಾದ ಅವಶ್ಯಕತೆಯಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಸಂಜೀವ ಮಠಂದೂರು ತಿಳಿಸಿದರು.
ಇದೇ ಸಂದರ್ಭ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ, ಉಪಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯ್ಕ, ವಿವಿಧ ತಾ.ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರುಗಳನ್ನು, ಹಾಲು ಉತ್ಪಾದನಾ ಸೊಸೈಟಿಯ ನಿದರ್ೆಶಕರುಗಳನ್ನು, ಸಹಕಾರಿ ಯೂನಿಯನ್ನ ಅಧ್ಯಕ್ಷರಾದ ಹರೀಶ್ ಆಚಾರ್ರವರನ್ನು ಅಭಿನಂದಿಸಲಾಯಿತು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಹಾಸ ಉಳ್ಳಾಲ್, ಶಾಸಕ ಎಸ್. ಅಂಗಾರ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದಶರ್ಿ ಶಾಂತಾ. ಆರ್ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಬಿ. ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಪ್ರ.ಕಾರ್ಯದಶರ್ಿ ಶೈಲಜಾ ಕೆ.ಟಿ ಭಟ್ ವಂದಿಸಿದರು

By Suddi9

Leave a Reply

Your email address will not be published. Required fields are marked *