ಬಂಟ್ವಾಳ: ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘ ಮತ್ತು ಮಂಗಳೂರು ರೆಡ್ ಕ್ರಾಸ್ ಸಂಸ್ಥೆ ಸಹಭಾಗಿತ್ವದಲ್ಲಿ ಬಿ.ಸಿ.ರೋಡ್ ಸಮೀಪದ ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇದೇ ಜು.30ರಂದು
ಶನಿವಾರ ಬೆಳಿಗ್ಗೆ ಗಂಟೆ 9.30ರಿಂದ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಆಸಕ್ತ ರಕ್ತದಾನಿಗಳು ಅಂದು ಬೆಳಿಗ್ಗೆ ಕಾಲೇಜಿನಲ್ಲಿ ಹೆಸರು ನೊಂದಾಯಿಸಿ ರಕ್ತದಾನ ಮಾಡುವ ಮೂಲಕ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
