ಬಂಟ್ವಾಳ: ಕರ್ನಾಟಕ ಪತ್ರಕರ್ತರ ಸಂಘ (ರಿ.) ಮತ್ತು ವಾರ್ತಾ -ಪ್ರಚಾರ ಇಲಾಖೆ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಆ.6ರಂದು ಬೆಳಿಗ್ಗೆ ಗಂಟೆ 9.15ಕ್ಕೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಚಾಣಕ್ಯ-2016’ ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ ಏರ್ಪಡಿಸಲಾಗಿದೆ. ಕನ್ನಡ ಮತ್ತು ಆಂಗ್ಲ ಭಾಷಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ ಪುರಭವನದಲ್ಲಿ ಹೆಸರು ನೊಂದಾಯಿಸಬಹುದು.
ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ಶಿವಪೂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಅಂದು ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಎಸ್ಪಿ ಭೂಷಣ್ ಜಿ.ಬೊರಸೆ, ಸಂಘದ ಗೌರವಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ, ಜಿಲ್ಲಾಧ್ಯಕ್ಷ ಸುದೇಶ ಕುಮಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ವಾರ್ತಾಧಿಕಾರಿ ಖಾದರ್ ಷಾ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಬಂಟ್ವಾಳ ಸಂಘದ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *