ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸಮೀಪದ ಸುಜೀರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ನೆಪದಲ್ಲಿ ಐವರು ಶಿಕ್ಷಕರನ್ನು ವರ್ಗಾವಣೆಗೊಳಿಸಿದಲ್ಲಿ ಇಲ್ಲಿನ 350ಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಆರೋಪಿಸಿ ಮಕ್ಕಳ ಪೋಷಕರು ಗುರುವಾರ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

