ವಿಟ್ಲ: ಮಾದರಿ ಶಾಲೆಯಲ್ಲಿ ಆರ್ ಕೆ ಆಟ್ರ್ಸ್ ವತಿಯಿಂದ ನಡೆದ ವನಮಹೋತ್ಸವ ಮತ್ತು ಸಸಿ ವಿತರಣಾ ಸಮಾರಂಭದಲ್ಲಿ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರು, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರವರನ್ನು ಸನ್ಮಾನಿಸಿದರು ಮತ್ತು ತಮ್ಮಕ್ಕ ರವರಿಂದ ಸಸಿಗಳನ್ನು ಪಡೆದು ಶಾಲಾ ವಠಾರದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವ ಆಚರಿಸಿದರು.
