ಮೂಡುಬಿದಿರೆ: ತೋಡಾರಿನಲ್ಲಿರುವ ಯೇನೆಪೋಯ ಇಂಜಿನಿಯರಿಂಗ್ ಕಾಲೇಜಿನ 2016-17ನೇ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಇ. ತರಗತಿ ಪ್ರಾರಂಭೋತ್ಸವ ಸಮಾರಂಭ ಸೋಮವಾರ ನಡೆಯಿತು. ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಯೆನೆಪೋಯ ಅಬ್ದುಲ್ಲಾ ಕುಂಞ ಸಮಾರಂಭ ಉದ್ಘಾಟಿಸಿ ಕಾಲೇಜಿನ ವೆಬ್ಸೈಟ್ ಬಿಡುಗಡೆಗೊಳಿಸಿದರು. ಯೆನೆಪೋಯ ಸಮೂಹ ಸಂಸ್ಥೆಗಳ ಕಾರ್ಯಾಚರಣಾ ನಿರ್ದೇಶಕ ಯೆನೆಪೋಯ ಅಬ್ದುಲ್ಲಾ ಜಾವೇದ್ ವಾರ್ಷಿಕ ಸಂಪುಟವನ್ನು ಬಿಡುಗಡೆಗೊಳಿಸಿದರು. 
ಕಾಲೇಜಿನ ಪ್ರಾಂಶುಪಾಲ ರಾಜೇಶ್ ಗ್ರೇಶನ್ ಡಿ’ಸೋಜಾ, ಯೆನೆಪೋಯ ವಿಶ್ವವಿದ್ಯಾಲಯದ ಕುಲಸಚಿವ ಶ್ರೀಕುಮಾರ್ ಮೆನನ್ ಉಪಸ್ಥಿತರಿದ್ದರು.ಪ್ರಾಧ್ಯಾಪಕ ಡಾ.ಸತೀಶ್ ಸ್ವಾಗತಿಸಿದರು. ಸಂಸ್ಥೆಯ ಸಹ ಪ್ರಾಧ್ಯಾಪಕ ನಾಝಿಯಾ ಹಾಗೂ ಶ್ವೇತಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಸಹ ಪ್ರಾಧ್ಯಾಪಕ ಜೆ. ಡಬ್ಲ್ಯು. ಪಿಂಟೋ ಅತಿಥಿಗಳನ್ನು ಪರಿಚಯಿಸಿದರು. ಸಶ್ಮಾ ವಂದಿಸಿದರು.

