ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಕೇಂದ್ರ ಸರಕಾರ ಜನಪಯೋಗಿ ಕಾರ್ಯಕ್ರಮಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮುಟ್ಟಿಸುವ ಮೂಲಕ ಮನೆ ಬೆಳಗುವ ಕಾರ್ಯ ಪಕ್ಷದ ಕಾರ್ಯಕರ್ತರಿಮದ ಆಗಬೇಕಾಗಿದೆ. ಅ ದೃಷ್ಟಿಯಲ್ಲಿ ನೂತನ ಯುವ ಮತ್ತು ಅನುಭವಿ ತಂಡ ತನ್ನ ಕೆಲಸಗಳನ್ನು ಮಾಡಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸಿ, ಮುಂದಿನ ಚುನಾವಣೆಯಲ್ಲ ಇದರ ಪಲಿತಾಂಶವನ್ನು ಪಡೆಯಬಹುದು ಎಂದು ಬಿ.ಜೆ.ಪಿ ನಾಯಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಹೇಳಿದರು.1 (6)

2 (4)

3 (3)

ಅವರು ಬಿಸಿರೋಡಿನ ಬಿ.ಜೆ.ಪಿ ಪಕ್ಷದ ಕಛೇರಿಯಲ್ಲಿ ನಡೆದ ಬಂಟ್ವಾಳ ಬಿ.ಜೆ.ಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಂಘಟನೆಯ ಉದ್ದೇಶದಿಂದ ಪಕ್ಷದ ಎಲ್ಲಾ ನಿಷ್ಟಾವಂತ ಕಾರ್ಯಕರ್ತರು ಪಕ್ಷಕ್ಕೆ ಜೀವಾಳ, ವೈಯಕ್ತಿಕ ಬಿನ್ನಾಭಿಪ್ರಾಯಗಳು ಇದ್ದರೆ ಅದನ್ನು ನಾಯಕರ ಜೊತೆಯಲ್ಲಿ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಮಾಡುವ. ಎಲ್ಲರೂ ಒಗ್ಗಟ್ಟಾಗಿ ಪಕ್ಷಕ್ಕೆ ಹಾನಿಯಾಗದ ರೀತಿಯಲ್ಲಿ ಒಂದೇ ಮನಸ್ಸಿನಿಂದ ದುಡಿದಾಗ ಮಾತ್ರ ಜನ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ಪಕ್ಷದಲ್ಲಿ ಶಿಸ್ತು, ಸಮಯ ಪಾಲನೆ ಮತ್ತು ಪಕ್ಷದ ಕಾರ್ಯಕ್ರಮಗಲ್ಲಿ ಕಡ್ಡಾಯವಾಗಿ ಪಾಲ್ಗೋಳ್ಳುವ ರೂಡಿಯನ್ನು ಮೈಗೂಡಿಸಿಕೊಳ್ಳೋಣ ಎಂದು ತಿಳಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ,ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ,ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ,ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ .ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ರಾಮ್‍ದಾಸ ಬಂಟ್ವಾಳ ಸ್ವಾಗತಿಸಿ, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ ವಂದಿಸಿದರು. ಮೋನಪ್ಪ ದೇವಸ್ಯ ಕಾರ್ಯಕ್ರಮ ನಿರೂಪಿಸದರು.

By suddi9

Leave a Reply

Your email address will not be published. Required fields are marked *