ಮೂಡುಬಿದಿರೆ: ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2016-17 ಸಾಲಿನ ವಿದ್ಯಾರ್ಥಿ ಸಂಸತ್ತು ಅನ್ನು ಶನಿವಾರ ಉದ್ಘಾಟಿಸಲಾಯಿತು. ವಕೀಲ ಚೇತನ್ ವರ್ಮ ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ಸಂಸತ್ತಿನ ಕಾರ್ಯ ವೈಖರಿಗಳ ಕುರಿತು ಮಾಹಿತಿ ನೀಡಿದರು. ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್, ಸಂಸದರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಮಾತನಡಿದರು.  ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಸಂತ್ ಕುಮಾರ್ ನಿಟ್ಟೆ, ಸಂಸ್ಥೆಯ ಸಹ ಆಡಳಿತಾಧಿಕಾರಿ ಸುಜೀತ್ ಮತ್ತು ಶಾಲಾ ಸಂಸತ್ತಿನ ಸಂಚಾಲಕ ರವಿರಾಜ್ ಉಪಸ್ಥಿತರಿದ್ದರು.
ಸುಹಾಸ್ ಸ್ವಾಗತಿಸಿದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಶ್ರದ್ಧಾ ವಂದಿಸಿದರು.
mbd_aug6_3

By suddi9

Leave a Reply

Your email address will not be published. Required fields are marked *