ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ವರ್ಷದ ಕಾರ್ಯಚಟುವಟಿಕೆಗಳನ್ನು ಆಳ್ವಾಸ್ ವಿಶ್ವಸ್ಥ ಮಂಡಳಿಯ ಸದಸ್ಯ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಅಂಕ ಗಳಿಕೆಯ ಜೊತೆಗೆ, ರಾಷ್ಟ್ರೀಯ ಸೇವಾ ಯೋಜನೆಯ ಸೇವಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ಉತ್ತಮಗೊಳಿಸಬಹುದು. ಇದರಿಂದ ರಾಷ್ಟ್ರ ಸೇವೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲಪ್ರೊ ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಶಿಸ್ತು ಮತ್ತು ರಾಷ್ಟ್ರೀಯತೆಯ ಮನೋಭಾವ ಬೆಳಸಿಕೊಳ್ಳಬೇಕು ಎಂದರು.ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಹಾಗೂ ಆಳ್ವಾಸ್ ಆಂಗ್ಲ ಮಾದ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಸಂತಕುಮಾರ್ ನಿಟ್ಟೆ ವೇದಿಕೆಯಲ್ಲಿದ್ದರು. ಎನ್‍ಎಸ್‍ಎಸ್ ಅಧಿಕಾರಿ ಅರುಣ್‍ಕುಮಾರ್ ಸ್ವಾಗತಿಸಿದರು. ವೆಂಕಟೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಲಾವಣ್ಯ ವಂದಿಸಿದರು.
