ವಿಟ್ಲ: ತುಳುನಾಡ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಉಳಿಸಿ ಬೆಳೆಸುವ ಉದ್ದೇಶದೊಂದಿಗೆ ಜು.6 ರಂದು ಶನಿವಾರದಂದು ಸಂತ ರೀಟಾ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಆಟಿಡೊಂಜಿ ಕೂಟವನ್ನು ನಡೆಸಿದ್ದು ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಶಾಲಾ ಸಮಿತಿಯ ಗೌರವ ಸಲಹೆಗಾರರಾದ ಸುದರ್ಶನ್ ಪಡಿಯಾರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತುಳುನಾಡಿನ ಸಂಸ್ಕೃತಿಯನ್ನು ಉಳಿಸುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಅವರಿಗೆ ಇಂತಹ ಕಾರ್ಯಕ್ರಮಗಳು ಸ್ಪೂರ್ತಿ ಎಂದು ತಿಳಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ನೆಲೆಯಲ್ಲಿ ಶಾಲಾ ಸಂಚಾಲಕರಾದ ವಂ. ಫಾ. ಎರಿಕ್ ಕ್ರಾಸ್ತಾ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸರ್ವಸದಸ್ಯರು, ಸಲಹಾ ಸಮಿತಿಗಳ ಸರ್ವಸದಸ್ಯರು ಉಪಸ್ಥಿತರಿದ್ದರು. ತದನಂತರ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿತು. ಕಾರ್ಯಕ್ರಮದ ವಿಶೇಷ ಅಂಗವಾಗಿ ಹಳೆಯ ಕಾಲದ ಸಾಮಾಗ್ರಿಗಳ ಪ್ರದರ್ಶನವು ಕಾರ್ಯಕ್ರಮಕ್ಕೆ ಹೆಚ್ಚಿನ ಶೋಭೆ ತಂದಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯಸ್ಥರಾದ ಸಚಿನ್ ಎಮ್. ಇವರು ನಿರ್ವಹಿಸಿದರೆ, ಸಹಶಿಕ್ಷಕಿ ವಿಜಯಲಕ್ಷ್ಮಿ ಇವರು ಸ್ವಾಗತಿಸಿದರು. ಹಾಗೆಯೇ ಸಹಶಿಕ್ಷಕ ಜಯರಾಮ ಶಾಸ್ತ್ರಿಯವರ ವಂದನಾರ್ಪಣೆಯೊಂದಿಗೆ ರಾಷ್ಟ್ರಗೀತೆಯಲ್ಲಿ ಸಮಾಪ್ತಿಗೊಂಡಿತು.

