ಬಂಟ್ವಾಳ: ತಾಲೂಕಿನ ವಿಶ್ವಕರ್ಮ ಸಮಾಜ ಸೇವಾ ಸಂಘ ಮತ್ತು ವಿಶ್ವಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯ ದಿನಾಚರಣೆ ಪ್ರಯುಕ್ತ ಬಿ.ಸಿ.ರೋಡ್‍ನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಭಾನುವಾರ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಉಡುಪಿ ವಿಶ್ವಕರ್ಮ ಒಕ್ಕೂಟ ಕಾರ್ಯಕಾರಿ ಸದಸ್ಯ ಬಿ.ಜಿ.ರಮೇಶ ಆಚಾರ್ಯ ಮತ್ತು ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ ಉದ್ಘಾಟಿಸಿದರು.ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು, ಮಹಿಳಾ ಮಂಡಳಿ ಅಧ್ಯಕ್ಷೆ ಗೀತಾ ರಮೇಶ ಆಚಾರ್ಯ ಮತ್ತಿತರರು ಇದ್ದರು.
