ವಿಟ್ಲ: ವಿಶ್ವ ಹಿಂದೂ ಪರಿಷದ್ ಮಾತೃ ಮಂಡಳಿ, ದುರ್ಗಾವಾಹಿನಿ ವಿಟ್ಲ ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮೂರ್ಕಜೆ ಮೈತ್ರೇಯಿ ಗುರುಕುಲಮ್ನ ವಿದ್ಯಾರ್ಥಿನಿ ಪೂರ್ಣಿಮಾ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಡಾ| ವಿದ್ಯಾ ಟಿ ರೈ ಭಾಗವಹಿಸಿದ್ದರು. ವೇದಿಕೆಯಲ್ಲಿ ಮಾತೃ ಮಂಡಳಿಯ ಪ್ರಮುಖ್ ಮೀನಾಕ್ಷಿದೇವಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶ್ರೀ ಪಂಚಲಿಂಗೇಶ್ವರ ಮಹಿಳಾ ಭಜನಾ ಮಢಳಿಯವರು ಭಜನೆ ನಡೆಸಿಕೊಟ್ಟರು. ಉದಯೇಶ ಕೆದಿಲಾಯ ಪೂಜಾ ವಿಧಿ ನೆರವೇರಿಸಿದರು. ರಾಜೇಶ್ವರಿ ಸ್ವಾಗತಿಸಿದರು. ರೇವತಿ ವಂದಿಸಿದರು. ಮೂಕಾಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ನಂದಿನಿ ಸಹಕರಿಸಿದರು.

