ಬಂಟ್ವಾಳ:ತುಂಬೆ ರಾಷ್ಟ್ರೀಯ ಹೆದ್ದಾರಿಯ ಯೂ ಟರ್ನ್‍ನಲ್ಲಿ ತಿರುವು ಪಡೆಯುತ್ತಿದ್ದ ಟಿಪ್ಪರ್ ಲಾರಿಯೊಂದು ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ವ್ಯಾನೊಂದು ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆಯಿತು. ವ್ಯಾನ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು ವ್ಯಾನ್ ಮತ್ತು ಬಸ್ ನಿಲ್ದಾಣಕ್ಕೆ ಅಲ್ಪ ಪ್ರಮಾಣದ ಹಾನಿಯಾಗಿದೆ. ಈ ಸಂದರ್ಭದಲ್ಲಿ ಬಸ್ ನಿಲ್ದಾಣದ ಬಳಿ ಯಾರೂ ಇಲ್ಲದಿದ್ದರಿಂದ ಸಂಭವನೀಯ ಅಪಾಯ ತಪ್ಪಿದಂತಾಗಿದೆ.
