ಬಂಟ್ವಾಳ: ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ 2016-17 ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆ ಕಾವಳಪಡೂರು ವಗ್ಗ ಸರಕಾರಿ ಪ್ರೌಢಶಾಲೆಯಲ್ಲಿ ಆ.29ಮತ್ತು ಆ.30ರಂದು ನಡೆಯಲಿದ್ದು ಆ ಪ್ರಯುಕ್ತ ಪೂರ್ವಭಾವಿ ಸಮಾಲೋಚನ ಸಭೆ ವಗ್ಗ ಸ.ಪ್ರೌ.ಶಾಲೆಯಲ್ಲಿ ಶುಕ್ರವಾರ ಜರಗಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಭಾಗವಹಿಸಿ ಮಾತನಾಡಿ ಮಕ್ಕಳ ಸರ್ವಾಂಗೀಣ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸರಕಾರ ಆಯೋಜಿಸಿದ್ದು ಮಕ್ಕಳ ಪ್ರತಿಭಾ ವಿಕಸನಕ್ಕೆ ಪೂರಕವಾಗುವಂತೆ ಸ್ಪರ್ಧೆಗಳನ್ನು ನಡೆಸಬೇಕು.ಇದಕ್ಕೆ ಇಲಾಖಾಧಿಕಾರಿಗಳು,ಶಿಕ್ಷಕರು ಹಾಗೂ ಪೋಷಕರು ಸಹಕರಿಸಬೇಕು ಎಂದು ಹೇಳಿದರುvogga

ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ ಅವರು ಮಾತನಾಡಿ ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿದ್ದು ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಲಾಗಿದೆ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಸರಕಾರಿ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲರಿಗೂ ಸರ್ವ ರೀತಿಯ ಆತಿಥ್ಯ ಒದಗಿಸಲಾಗುವುದು.ಕಾರ್ಯಕ್ರಮದ ಯಶಸ್ಸಿಗೆ ಸರ್ವ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಅವರು ಮಾಹಿತಿ ನೀಡಿ ಮಾತನಾಡಿ ಸ್ಪರ್ಧೆಗಳನ್ನು ವ್ಯವಸ್ಥಿತವಾಗಿ ನಡೆಸುವಂತೆ ಮತ್ತು ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಸಮಯ ಪಾಲನೆಯೊಂದಿಗೆ ನಡೆಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ,ಸಲಹೆ,ಸೂಚನೆಗಳನ್ನು ನೀಡಲಾಯಿತು.
ಜಿ.ಪಂ.ಸದಸ್ಯಬಿ.ಪದ್ಮಶೇಖರ ಜೈನ್,ತಾಪಂ.ಸ್ಥಾಯಿ ಸಮತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ,ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಪ್ರಮೋದ್ ಕುಮಾರ್ ರೈ,ಪಂ.ಅ.ಅ„ಕಾರಿ ಧರ್ಮಪಾಲ ಪೂಜಾರಿ, ಜಿಲ್ಲಾ ವಿಷಯ ಪರಿವೀಕ್ಷಕರಾದ ರಾಧಾಕೃಷ್ಣ ಭಟ್,ಶಂಕರಪ್ಪ ಮುದ್ನಾಳ್,ತಾಲೂಕು ದೈಹಿಕ ಪರಿವೀಕ್ಷಕ ಗುರುನಾಥ ಬಾಗೇವಾಡಿ,ಬಿಆರ್‍ಸಿ ಸಮನ್ವಯಾಧಿಕಾರಿ ರಾಜೇಶ್, ತಾಲೂಕು ನೋಡೆಲ್ ಅಧಿಕಾರಿ ಸುಜಾತ,ಶಿಕ್ಷಣ ಸಂಯೋಜಕರಾದ ಶ್ರೀಕಾಂತ್,ಪುಷ್ಪಾ,ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್,ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ,ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ತಾವ್ರೋ,ತಾಲೂಕು ಅಧ್ಯಕ್ಷ ಜೋಯೆಲ್ ಲೋಬೋ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್,ಕಾರ್ಯದರ್ಶಿ ಜಯರಾಮ್,ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ ರಾವ್,ಗ್ರಾ.ಪಂ.ಸದಸ್ಯರಾದ ವೀರೇಂದ್ರ ಅಮೀನ್,ಚಂದ್ರಶೇಖರ ಕರ್ಣ,ಯೂಸುಫ್,ಪ.ಪೂ.ಕಾಲೇಜು ಪ್ರಾಂಶುಪಾಲೆ ರೇಖಾ,ಮೊರಾರ್ಜಿ ವಸತಿ ಶಾಲಾ ಪ್ರಾಂಶುಪಾಲ ನಾಗರಾಜ್,ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.  ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಅವರು ಸ್ವಾಗತಿಸಿದರು.ಕೆದ್ದಳಿಕೆ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ರಮೇಶ್ ನಾಯಕ್ ರಾಯಿ ವಂದಿಸಿದರು.ಮುಖ್ಯ ಶಿಕ್ಷಕ ಆದಂ ಸಾಹೇಬ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *