ವಿಟ್ಲ:  ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ, ಒಮೇಗಾ ಆಸ್ಪತ್ರೆ ಮಂಗಳೂರು ಹಾಗೂ ಮಂಗಳೂರು ಹಾರ್ಟ್‍ಸ್ಕ್ಯಾನ್ ಫೌಂಡೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಹೃದಯ ರೋಗ ತಪಾಸಣಾ ಮತ್ತು ಮಧುಮೇಹ ತಪಾಸಣಾ ಶಿಬಿರವು ಆ.14 ರಂದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸಭಾ ಭವನದಲ್ಲಿ ನಡೆಯಿತು.

SHV_7538 SHV_7554 ಈ ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಲಯ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ, ಒಮೇಗಾ ಆಸ್ಪತ್ರೆಯ ಡಾ| ಪ್ರಸನ್ನ ಕುಮಾರ್ ಹಾಗೂ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಭಾಗವಹಿಸಿದ್ದರು. ಅಧ್ಯಕ್ಷತೆ ವಹಿಸಿದ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಲಯನೆಸ್ ಅಧ್ಯಕ್ಷೆ ಲೀನಾ ವಂದಿಸಿದರು.

By suddi9

Leave a Reply

Your email address will not be published. Required fields are marked *