ಕಿನ್ನಿಗೋಳಿ: ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ 3ನೇ ವರ್ಷದ ಭಜನಾ ಮಂಗಲೋತ್ಸವ ಶುಕ್ರವಾರ ನಡೆಯಿತು. ಸೂರ್ಯೋದಯದಿಂದ ಸೂರ್ಯಹಸ್ತದವರೆಗೆ ನಡೆದ ಕಾರ್ಯಕ್ರಮವನ್ನು ಹಿರಿಯರಾದ ವಾಸುದೇವ ರಾಮ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭ ಕೆ. ಶಿವರಾಮ ಆಚಾರ್ಯ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಪ್ರಥ್ವಿರಾಜ್ ಆಚಾರ್ಯ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ದೀನೇಶ್ ಆಚಾರ್ಯ, ಕೆ.ಬಿ. ಸುರೇಶ್, ಉದಯ ಆಚಾರ್ಯ, ಪ್ರಭಾಕರ್ ಆಚಾರ್ಯ, ಸುರೇಂದ್ರ ಆಚಾರ್ಯ, ಯೋಗಿಶ್ ಆಚಾರ್ಯ, ದಿನೇಶ್ ಕೊಡೆತ್ತೂರು, ಬಾಸ್ಕರ ಆಚಾರ್ಯ, ಹರೀಶ್ ಆಚಾರ್ಯ, ಮತ್ತಿತರರು ಉಪಸ್ಥಿತರಿದರು.
