ಬಂಟ್ವಾಳ:ಸಮಾಜದಲ್ಲಿ ವಿವಿಧ ಧಾರ್ಮಿಕ ಆಚರಣೆಗಳನ್ನು ಕೇವಲ ಮನೋರಂಜನೆಗೆ ಸೀಮಿತಗೊಳಿಸದೆ ಅದರ ಪ್ರಾಮುಖ್ಯತೆ ಮತ್ತು ವಿಶೇಷತೆ ಬಗ್ಗೆ ಅರ್ಥೈಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಸುಸಂಸ್ಕøತ ಯುವ ಪೀಳಿಗೆಯನ್ನು ಕಾಣಲು ಸಾಧ್ಯವಿದೆ ಎಂದು ಹಿಂದೂ ಜನಜಾಗೃತಿ ವೇದಿಕೆ ಜಿಲ್ಲಾ ಸಮನ್ವಯಕಾರ ಮೋಹನ್ ಜಿ.ಗೌಡ ಹೇಳಿದ್ದಾರೆ.
ತಾಲೂಕಿನ ಕುದ್ಕೋಳಿ ಓಂ ಫ್ರೆಂಡ್ಸ್ ಯುವಕ ಮಂಡಲ ಮತ್ತು ಮಹಿಳಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಾನುವಾರ ನಡೆದ 10ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಧಾರ್ಮಿಕ ಉಪನ್ಯಾಸ ನೀಡಿದರು.
ರಾಯಿ ಶ್ರೀ ಮಹಾಲಿಂಗೇಶ್ವರ ದೇವಳದ ಮಾಜಿ ಆಡಳಿತ ಮೊಕ್ತೇಸರ ರಮೇಶ ಭಟ್ ಮಾದೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದುಶ್ಚಟಮುಕ್ತ ಸಮಾಜ ನಿರ್ಮಿಸಲು ಯುವಜನತೆ ಕೈ ಜೋಡಿಸಬೇಕು ಎಂದರು.

28btl-Kudkoli
ಬಿ.ಸಿ.ರೋಡ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕೆ.ಸರಸ್ವತಿ ಭಟ್, ರಾಜ್ಯ ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಸಂಗಬೆಟ್ಟು ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ, ವಸ್ತ್ರೋದ್ಯಮಿ ದಿನೇಶ ಮೈಂದಬೆಟ್ಟು ಮತ್ತಿತರರು ಶುಭ ಹಾರೈಸಿದರು.
ಗೇರು ಅಭಿವೃದ್ಧಿ ನಿಗಮ ಸದಸ್ಯ ಜಗದೀಶ ಕೊಯಿಲ, ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಳ ಮೊಕ್ತೇಸರ ಗೋಪಾಲ ಗೌಡ, ರಾಜ್ಯ ವಿದ್ಯುತ್ ನಿಗಮ ನಿರ್ದೇಶಕ ಚಂದ್ರಹಾಸ ಸನಿಲ್ ಮೂಡುಬಿದ್ರೆ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ ಆಚಾರ್ಯ, ಲಿಂಗಪ್ಪ ಪೂಜಾರಿ, ರಾಷ್ಟ್ರೀಯ ಕ್ರೀಡಾಪಟು ಜಯ ನಾಯ್ಕ, ಸಂಘದ ಅಧ್ಯಕ್ಷ ಪೂವಪ್ಪ ಜಿ.ಶಾಂತಿಪಲ್ಕೆ, ಮಹಿಳಾ ಸಮಿತಿ ಅಧ್ಯಕ್ಷೆ ಮೋಹಿನಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರು, ಸಂಘದ ಸ್ಥಾಪಕ ಸದಸ್ಯರು ಮತ್ತು ದಾನಿಗಳನ್ನು ಸನ್ಮಾನಿಸಿ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮಹಿಳಾ ಸಮಿತಿ ಕಾರ್ಯದರ್ಶಿ ಉಷಾ ಸ್ವಾಗತಿಸಿ, ರುದೇಶ್ ಪೂಜಾರಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮ ಬಳಿಕ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *