ಬಜಪೆ:ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾದ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದಕ ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನೀಡುವ ದ ಕ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಕೃಷಿ ಪತ್ತಿನ ಎ ದರ್ಜೆಯ ಪ್ರಥಮ ಸ್ಥಾನದ ಪ್ರಶಸ್ತಿಯನ್ನು ಸತತ 16ನೇ ಬಾರಿ ಪಡೆದುಕೊಂಡಿದೆ.
ಮಂಗಳೂರಿನಲ್ಲಿ ಜರಗಿದ ಎಸ್‍ಸಿ ಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯ ಸಂದರ್ಭ ಬಜಪೆ ವ್ಯವಾಸಾಯ ಬ್ಯಾಂಕ್‍ನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಹಾಗೂ ಪ್ರಧಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ ಅವರುಗಳು ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿಯನ್ನು ವಿತರಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ಧೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.
