ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಕ್ಷೇತ್ರದ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿ ಮತ್ತು ಸದಸ್ಯರುಗಳ ಪದಗ್ರಹಣ ಕಾರ್ಯಕ್ರಮವು ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ನಡೆಯಿತು .ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತ್ತು. ನಳಿನಿ ಬಿ.ಶೆಟ್ಟಿಯವರು ಅಧ್ಯಕ್ಷತೆ ವಹಿಸಿದರು. ಜಿಲ್ಲಾಧ್ಯಕ್ಷರಾದ ಶ್ರೀಮತಿ ಪೂಜಾ ಪೈ ,ರಾಜ್ಯ ಸಮಿತಿ ಸದಸ್ಯರಾದ ಶ್ರೀಮತಿ ಸುಲೋಚನಾ ಜಿ.ಕೆ.ಭಟ್, ಶ್ರೀಮತಿ ಸಂಧ್ಯಾ ವೆಂಕಟೇಶ, ಮಂಗಳೂರು ಉತ್ತರದ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮ, ಬಂಟ್ವಾಳ ಪ್ರಮುಖರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿ,ಬಂಟ್ವಾಳ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,ಕ್ಷೇತ್ರ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಜಯಂತಿ ಉಪಸ್ಥಿತರಿದ್ದರು.

