ಬೆಳ್ತಂಗಡಿ:ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಗೋವಿಂದ ಸ್ಪರ್ಧೆಯಲ್ಲಿ ಬಿದ್ದು ಮೃತಪಟ್ಟ ಪುಂಜಾಲಕಟ್ಟೆ ನಿವಾಸಿ ಶಿಶಿರ್ ಪೂಜಾರಿ ಮನೆಗೆ ಬಂಟ್ವಾಳ ಬಿಜೆಪಿ ಮುಖಂಡರಾದ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವದಾಸ ಶೆಟ್ಟಿ, ಜಿ.ಪಂ ಸದಸ್ಯರಾದ ತುಂಗಪ್ಪ ಬಂಗೇರಾ,ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ,ಕ್ಷೆತ್ರ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಕ್ಷೆತ್ರ ಕಾರ್ಯದರ್ಶಿ ರಮನಾಥ ರಾಯಿ,ಮಾಜಿ ಜಿ.ಪಂ ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ಪಿಲಾತಬೆಟ್ಟು ಗ್ರಾ.ಪಂ ಅಧ್ಯಕ್ಷರಾದ ಚಂದ್ರಶೆಖರ ಶೆಟ್ಟಿ,ಇರ್ವತ್ತೂರು ಗ್ರಾ.ಪಂ ಉಪಾಧ್ಯಕ್ಷರಾದ ಶಂಕರ ಶೆಟ್ಟಿ ಬೆದ್ರಮಾರು ಮತ್ತಿತರರು ಉಪಸ್ಥಿತರಿದ್ದರು.
