ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಒಂಟಿಕಟ್ಟೆ ಇದರ ವತಿಯಿಂದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ‘`ಕೆಸರ್ದ ಗೊಬ್ಬು” ವಿವಿಧ ತುಳುನಾಡ ಕ್ರೀಡಾ ಸ್ಪರ್ಧೆಗಳು ಒಂಟಿಕಟ್ಟೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕ್ರೀಡಾಂಗಣದಲ್ಲಿ ನಡೆಯಿತು.

mbd_sep1_1 (4)

mbd_sep1_1 (1) - Copy

mbd_sep1_1 (2)

mbd_sep1_1 (3)
ಕುಂಗೂರು ಶಿವಪ್ರಸಾದ್ ಆಚಾರ್ಯ ಅವರು ಹಿಂಗಾರವನ್ನು ಅರಳಿಸಿ ನಂತರ ಹಾಲನ್ನು ಹಾಕುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ ಸಚಿವ, ಕೆ. ಅಭಯಚಂದ್ರ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಒಂಟಿಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುನೀಲ್ ಕರ್ಕೇರಾ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿ.ಪ್ರ.ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಪುರಸಭಾಧ್ಯಕ್ಷೆ ರೂಪಾ ಎಸ್.ಶೆಟ್ಟಿ, ಉಪಾಧ್ಯಕ್ಷೆ ಶಕುಂತಳಾ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಮೂಡಾ ಸದಸ್ಯ ಸುರೇಶ್ ಪ್ರಭು, ಪುರಸಭಾ ಮಾಜಿ ಅಧ್ಯಕ್ಷ ಬೋಜ ಕೋಟ್ಯಾನ್, ಗೋಪಾಲ ಬಂಗೇರಾ ಹೆಗ್ಡೆಬೆಟ್ಟು, ಒಂಟಿಕಟ್ಟೆ ಶ್ರೀ ಅಯ್ಯಪ್ಪ ಮಂದಿರದ ಗುರುಸ್ವಾಮಿ ಪ್ರಶಾಂತ್ ಅಂಚನ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸನ್ಮಾನ : ಸೈನಿಕ ರಾಜೇಶ್ ನಾಯ್ಕ್ ಹಾಗೂ ಮಾಜಿ ಸೈನಿಕ ಕಿಶೋರ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು. ಪುರಸಭಾ ಸದಸ್ಯ ನಾಗರಾಜ ಪೂಜಾರಿ ಸ್ವಾಗತಿಸಿದರು. ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. ಓಟ, ಹಾಳೆ ಎಳೆಯುವುದು, ವಾಲಿಬಾಲ್, ಹಗ್ಗಜಗ್ಗಾಟ, ಕಬಡ್ಡಿ, ತಪ್ಪಂಗಾಯಿ ಸಹಿತ ಇತರ ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ನಡೆದವು.

By suddi9

Leave a Reply

Your email address will not be published. Required fields are marked *