ವಿಟ್ಲ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡು ಪ್ರಯಾಣಿಕರು ಪವಾಢ ಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ. ಬಸ್ ಚಾಲಕ ಕೇರಳ ನಿವಾಸಿ ಐವನ್ ಎಂಬವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.02vtl3  bus

02vtl2 buss

ಬಂಗಳೂರು ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬುಡೋಳಿ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತೆರಳಿ ಚರಂಡಿಗೆ ಉರುಳಿ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗೊಳ್ಳದೇ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಉಪವಿಭಾಗದ ಎಎಸ್‍ಪಿ ರಿಷ್ಯಂತ್, ಬಂಟ್ವಾಳ ಉಪ ವಿಭಾಗದ ಡಿವೈಎಸ್‍ಪಿ ರವೀಶ್ ಸಿ.ಆರ್, ಬಂಟ್ವಾಳ ವೃತ್ತ ನಿರೀಕ್ಷಕ ಮಂಜಯ್ಯ, ಪುತ್ತೂರು ಸಂಚಾರ ಠಾಣೆಯ ಎಸೈ ನಾಗರಾಜ್, ಉಪ್ಪಿನಂಗಡಿ ಪೊಲೀಸ್ ಠಾಣಾ ಎಸೈ ತಿಮ್ಮಪ್ಪ ನಾಯ್ಕ, ಬಂಟ್ವಾಳ ಟೌನ್ ಎಸೈ ನಂದಕುಮಾರ್, ವಿಟ್ಲ ಎಸೈ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

By suddi9

Leave a Reply

Your email address will not be published. Required fields are marked *