ಬಂಟ್ವಾಳ:ರಾಜ್ಯದ 6 ಜಿಲ್ಲೆಗಳಲ್ಲಿ 9/11ಗೆ ಸಂಬಂದಿಸಿ ಸರಕಾರದ ಬೇಜವಾಬ್ದಾರಿಯಿಂದ ಲಕ್ಷಾಂತರ ಮಂದಿ ತೊಂದರೆ ಅನುಭವಿಸುತ್ತಿದ್ದು ಈ ಗೊಂದಲವನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ವತಿಯಿಂದ ಸೆ. 3ರಂದು ಬಿ.ಸಿ.ರೋಡಿನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಬಿಜೆಪಿ ಮುಖಂಡರಾದ ರಾಜೇಶ್ ನಾಯಕ್ , ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹಾಗೂ ಬಿಜೆಪಿಯ ಜಿಲ್ಲಾ ಹಾಗೂ ತಾಲೂಕಿನ ಪದಾಧಿಕಾರಿಗಳು ಉಪೌಆಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. 

ಬೆಳಗ್ಗೆ 8ರಿಂದ ಸಂಜೆ 5ರವರೆಗೆ ನಡೆಯುವ ಈ ಉಪವಾಸ ಸತ್ಯಗ್ರಹ ಮುಂದುವರಿಯಲಿದೆ. ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಸುನೀಲ್ ಕುಮಾರ್, ಎಸ್.ಅಂಗಾರ, ಗಣೇಶ್ ಕಾರ್ಣಿಕ್, ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಸಚಿವ ನಾಗರಾಜ ಶೆಟ್ಟಿ, ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸೇರಿದಂತೆ ಪಕ್ಷದ ಜಿಲ್ಲಾ ನಾಯಕರು, ಕಾರ್ಯಕರ್ತರು, ನಾಗರಿಕರು ಈ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.

