ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಸಹಯೋಗದೊಂದಿಗೆ ವಿಠಲ ಪ್ರೌಢ ಶಾಲಾ ಮೈದಾನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ನಡೆಯಿತು. ಈ ಪಂದ್ಯಾಟದ ಉದ್ಘಾಟನೆಯನ್ನು ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರಾಮದಾಸ್ ಶೆಣೈಯವರು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ಉಪಾಧ್ಯಕ್ಷ ಕ ಶಿ ವಿಶ್ವನಾಥ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಜೆಸಿಐ ಅಧ್ಯಕ್ಷ ಬಾಬು ಕೊಪ್ಪಳ, ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಸಂಸ್ಥೆಯ ಕೋಶಾಧಿಕಾರಿ ನಿತ್ಯಾನಂದ ನಾಯಕ್,ಪ್ರಾಂಶುಪಾಲ ಆದರ್ಶ ಎ ಎಸ್, ನಿವೃತ್ತ ಉಪ ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್ ಭಾಗವಹಿಸಿದ್ದರು ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಸಿ ಹೆಚ್ ಸುಬ್ರಹ್ಮಣ್ಯ ಭಟ್ ವಂದಿಸಿದರು. ರಾಜಶೇಖರ್ ನಿರೂಪಿಸಿದರು.

vb (1)

vb (2)

vb (3)

By suddi9

Leave a Reply

Your email address will not be published. Required fields are marked *