ಬಜ್ಪೆ: ಬಜ್ಪೆ ಠಾಣಾ ವ್ಯಾಪ್ತಿಯ ಧೂಮಾವತಿ ನಗರದಲ್ಲಿ ನಗದು ಸಹಿತ ಲಕ್ಷಾಂತರ ಮೌಲ್ಯದ ಕಳ್ಳತನ ನಡೆದಿದೆ. ಆದಿತ್ಯವಾರ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ನಗದು ಸಹಿತ ಬೆಳೆಬಾಳುವ ಸೊತ್ತುಕಳವು ಮಾಡಿ ಪರಾರಿಯಾಗಿದ್ದಾರೆ.

ಮನೆ ಮಾಲಿಕ ಧೂಮಾವತಿನಗರದ ದಯಾನಂದ ಕೋಟ್ಯಾನ್ ಅವರು ಕಂಪೆನಿಯೊಂದರಲ್ಲಿ ಸೆಕ್ಯೂರಿಟಿ ಗಾಡರ್್ ಆಗಿ ಕೆಲಸ ಮಾಡುತ್ತಿದ್ದು ಅವರ ಹೆಂಡತಿ ಮಕ್ಕಳ ಜೊತೆ ಸಂಬಂಧಿಕರ ಮನೆಗೆ ಹೋಗಿದ್ದರು. ಮರಳಿ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಟಿ.ವಿ., ಮೂರುವರೆ ಪವನ್ ಚಿನ್ನ, 30 ಸಾವಿರ ನಗದು ಹಾಗೂ ಇನ್ನಿತರ ಬೆಳೆಬಾಳುವ ಸೊತ್ತುಗಳನ್ನು ಕಳ್ಳರು ಲಪಟಾಯಿಸಿದ್ದಾರೆ. ಮನೆಗೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳವನ್ನು ಕರೆಸಲಾಗಿದ್ದು ತನಿಖೆ ನಡೆಸಿ ಹೋಗಿದ್ದಾರೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
