ಬಂಟ್ವಾಳ: ದ.ಕ.ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟದ ಪುತ್ತೂರು ಬೆಥನಿ ಆಂಗ್ಲಮಾಧ್ಯಮ ಶಾಲೆ, ಎಸ್‍ವಿಎಸ್ ಬಂಟ್ವಾಳ, ಪ್ರತಿಭಾ ಪೌಢಶಾಲೆ ಪಟ್ಟೆ ಪುತ್ತೂರು ಹಾಗೂ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

img_0687

ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ ಬೆಥನಿ ಆಂಗ್ಲಮಾಧ್ಯಮ ಶಾಲೆ ಪ್ರಥಮ ಹಾಗೂ ಮಂಗಳೂರು ದಕ್ಷಿಣದ ಸೈಂಟ್ ಜೆರೋಸಾ ಹೈಯರ್ ಪ್ರೈಮರಿ ಸ್ಕೂಲ್ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಾಥಮಿಕ ಹಂತದ ಬಾಲಕರ ವಿಭಾಗದಲ್ಲಿ ಬಂಟ್ವಾಳ ಎಸ್‍ವಿಎಸ್ ಶಾಲೆ ಪ್ರಥಮ ಹಾಗೂ ಮಂಗಳೂರು ಉತ್ತರದ ಅಲ್ ಬದ್ರಿಯಾ ಸ್ಕೂಲ್ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಪ್ರೌಢಶಾಲಾ ಹಂತದ ಬಾಲಕಿಯರ ವಿಭಾಗದಲ್ಲಿ ಪುತ್ತೂರಿನ ಪಟ್ಟೆ ಪ್ರತಿಭಾ ಪ್ರೌಢಶಾಲೆ ಪ್ರಥಮ ಹಾಗೂ ಮಂಗಳೂರು ಉತ್ತರದ ಸುರತ್ಕಲ್ ಮಹಾಲಿಗೇಶ್ವರ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದಿದೆ. ಪ್ರೌಢಶಾಲಾ ಹಂತದ ಬಾಲಕರ ವಿಭಾಗದಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಹಾಗೂ ಮಂಗಳೂರು ದಕ್ಷಿಣದ ವಾಮಂಜೂರು ವಿದ್ಯಾಜ್ಯೋತಿ ಪ್ರೌಢಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಶುಕ್ರವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಕ್ರೀಡಾಕೂಟದಲ್ಲಿ ವಿಶೇಷ ಸಾಧನೆಗೈದ ಮಹಮ್ಮದ್ ನಯೀಮ್, ಸುಮಂತ್ ಆಚಾರ್ಯ, ಖುಷಿ ರೈ, ಪ್ರತೀಕ್ಷಾ ಬಿ. ಯವರನ್ನು ಫಲಕ ನೀಡಿ ಗೌರವಿಸಲಾಯಿತು. ಈ ಸಂದರ್ಭ ಶಾಲಾ ಸಂಚಾಲಕ ಪ್ರಹ್ಲಾದ್ ಜೆ ಶೆಟ್ಟಿ,  ದೈಹಿಕ ಶಿಕ್ಷಣ ಪರಿವೀಕ್ಷಕ ಗುರುನಾಥ್ ಬಾಗೇವಾಡಿ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೆ.ಬಾಲಕೃಷ್ಣ ಆಳ್ವ, ಉಪಾಧ್ಯಕ್ಷೆ ಲಕ್ಷ್ಮೀ ಟೀಚರ್, , ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ಡಾನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸುಧಾ ಎನ್.ರಾವ್, ಹಂಸವೇಣಿ ಮತ್ತು ಯಜ್ಞೇಶ್ವರಿ ಎಸ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲೆಯ ಏಳು ವಲಯಗಳ 28 ತಂಡಗಳು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದರು.

……………………………………………………………………………………………………………………………………………………
ಚಿತ್ರ ಇದೆ; ಪ್ರೌಡಶಾಲಾ ಹಂತದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನಿಯಾದ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ತಂಡ ಬಹುಮಾನ ಸ್ವೀಕರಿಸುತ್ತಿರುವುದು.

By Suddi9

Leave a Reply

Your email address will not be published. Required fields are marked *