ವಿಟ್ಲ: ಜೇಸಿಐ ವತಿಯಿಂದ ಕಾಶಿಮಠ ಅಂಗನವಾಡಿ ಕೇಂದ್ರಕ್ಕೆ ಕಬ್ಬಿಣದ ಗೇಟ್ ಅಳವಡಿಸಲಾಯಿತು. ಇದರ ಉದ್ಘಾಟನೆಯನ್ನು ವಲಯಾಧ್ಯಕ್ಷರ ವಿಶೇಷ ಪ್ರತಿನಿಧಿ ಶಕೀರ್ ಯಂ ಹಾವಂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳು, ಜೇಸಿಐ ಅಧ್ಯಕ್ಷ ಬಾಬು ಕೆ ವಿ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಪೂರ್ವಾಧ್ಯಕ್ಷರು ಮತ್ತು ಸದಸ್ಯರು, ಶ್ರೀಕಾಶಿ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು. ಆ ಭಾಗದ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಜಯಂತ ರವರು ಪಟ್ಟಣ ಪಂಚಾಯತ್ ಹಾಗೂ ಅಂಗನವಾಡಿಯ ಪರವಾಗಿ ಗೇಟ್ ಒದಗಿಸಿದ ಜೇಸಿಐ ಅಧ್ಯಕ್ಷ ಬಾಬು ಕೆ ವಿ ಯವರಿಗೆ ಕೃತಜ್ಞತೆ ಸಲ್ಲಿಸಿದರು.

