ಬಂಟ್ವಾಳ: ಪ್ರೀತಿಯಿಂದ ಜಗತ್ತನ್ನು ಗೆಲ್ಲಬಹುದು ಎಂಬಂತೆ ಶಿಕ್ಷಣ ಮತ್ತು ಸಾಮರಸ್ಯದಿಂದ ಶೋಷಣೆಮುಕ್ತ ಸಮಾಜ ನಿರ್ಮಿಸುವ ಸ್ವಾಭಿಮಾನದ ಬದುಕಿನ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರು ಕೇರಳದ ಶಿವಗಿರಿಯಲ್ಲಿ ಜನಿಸಿದ್ದರೂ ಇದೇ ಪ್ರಥಮ ಬಾರಿಗೆ ಈ ರಾಜ್ಯದಲ್ಲಿ ಜನ್ಮ ದಿನಾಚರಣೆ ಆಚರಿಸುವ ಯೋಗ ಬಂದಿರುವುದು ನಿಜಕ್ಕೂ ಸಂತಸದಾಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

16btl-sajipa
ತಾಲ್ಲೂಕಿನ ಸಜಿಪಮೂಡ ಸುಭಾಶ್ನಗರ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ ಸರ್ಕಾರದ ವತಿಯಿಂದ ಇದೇ ಪ್ರಥಮ ಬಾರಿಗೆ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 162ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇಲ್ಲಿನ ಸಜಿಪಮೂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಕೆ. ಸಂಜೀವ ಪೂಜಾರಿ ನೇತೃತ್ವದಲ್ಲಿ ಸಲ್ಲಿಸಿದ್ದ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಮು
ಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಂದರ್ಭ ಎಂದು ಪರಿಗಣಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರಿಗೆ ಸ್ವತಃ ಕೈಬರಹ ಮೂಲಕ ಸೆ.16ರಂದು ರಾಜ್ಯಾದ್ಯಂತ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲು ಸೂಚಿಸಿರುವುದನ್ನು ಅವರು ನೆನಪಿಸಿಕೊಂಡರು.

ಜಾತಿ, ಧರ್ಮ, ಭಾಷೆ ಮೀರಿ ಸಾಮರಸ್ಯ ಮತ್ತು ಹಸಿವು ಮುಕ್ತ ಸಮಾಜ ನಿರ್ಮಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ನೀಡುತ್ತಿರುವ ‘ವಿದ್ಯಾಸಿರಿ’ ಯೋಜನೆ ಜಿಲ್ಲೆಯಲ್ಲಿ ಎರಡು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದರು. ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಈ ಹಿಂದೆ ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ಮೇಲ್ವರ್ಗದ ಜನರಿಂದ ಕೆಳವರ್ಗದ ಜನರ ಮೇಲಿನ ದಬ್ಬಾಳಿಕೆ ಮತ್ತು ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಬ್ರಹ್ಮಶ್ರೀ ಅವರು ಹೋರಾಟ ನಡೆಸಿದ ಬದುಕಿನ ಸಂದೇಶ ಯುವಜನತೆಗೆ ಮಾದರಿಯಾಗಬೇಕು ಎಂದರು. ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಸದಾನಂದ ಪೆರ್ಲ ಮಾತನಾಡಿ, ಸ್ವತಃ ಮಹಾತ್ಮ ಗಾಂಧೀಜಿ ಅವರಿಂದಲೂ ಬ್ರಹ್ಮಶ್ರೀ ಎಂದು ಕರೆಸಿಕೊಂಡ ನಾರಾಯಣಗುರು ಸಾಮಾಜಿಕ ಪರಿವರ್ತನೆಗಾಗಿ ಧಾರ್ಮಿಕ ಮತ್ತು ವೈದಿಕ ಪಾಠ ನೀಡಿದ್ದಾರೆ. ಇದರಿಂದಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸಹಿತ ಅಟಲ್ ಬಿಹಾರಿ ವಾಜಪೇಯಿ, ಹಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತಿತರರು ಶಿವಗಿರಿಗೆ ಭೇಟಿ ನೀಡಿ ಅಲ್ಲಿನ ಗುರುಸಂದೇಶ ಅನುಷ್ಠಾನಗೊಳಿಸಲು ಪ್ರಯತ್ನಿಸಿದ್ದಾರೆ ಎಂದರು.

ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮತ್ತಿತರರು ಶುಭ ಹಾರೈಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಕಮಲಾಕ್ಷಿ ಕೆ. ಪೂಜಾರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಸದಸ್ಯ ವಾಸು ನಾಯ್ಕ, ಸಜಿಪಮೂಡ ಮತ್ತು , ಸಜಿಪಮುನ್ನೂರು ಗ್ರಾಮಪಂಚಾಯಿತಿ  ಅಧ್ಯಕ್ಷರಾದ ಗಣಪತಿ ಭಟ್ ಮತ್ತು ಮಹಮ್ಮದ್ ಶರೀಫ್, ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಪ್ರಮುಖರಾದ ಬೇಬಿ ಕುಂದರ್, ಅರುಣ್ ಕುಮಾರ್, ಜಗದೀಶ, ಜಯಶ್ರೀ ಕರ್ಕೇರ, ಯಶವಂತ ದೇರಾಜೆ ಮತ್ತಿತರರು ಇದ್ದರು. ಇದೇ ವೇಳೆ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸಮಿತಿ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಗಿರೀಶ್ ಪೆರ್ವ ವಂದಿಸಿದರು,  ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು.  ಪುರಂದರ ಹೆಗ್ಡೆ ಸ್ವಾಗತಿಸಿ ವಂದಿಸಿದರು.

By Suddi9

Leave a Reply

Your email address will not be published. Required fields are marked *