ಮೂಡುಬಿದಿರೆ : ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ವಲಯದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಸ. ಹಿ. ಪ್ರಾ. ಶಾಲೆ ಮಾಂಟ್ರಾಡಿಯಲ್ಲಿ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಜಯರಾಜ್ ಪೂಜಾರಿ ಅಧ್ಯಕ್ಷತೆಯಲ್ಲಿ ನೆಲ್ಲಿಕಾರು ಗ್ರಾ. ಪಂ ಅಧ್ಯಕ್ಷ ಜಯಂತ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಶಿಕ್ಷಣ ಸಂಯೋಜಕ ದಿನೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಸ್ಟೇನಿ ಪಿಂಟೋ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಕ್ಷಕಿ ಜಾನೆಟ್ ಲೋಬೋ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಮಾರ್ಗರೇಟ್ ಡಿ’ಸೋಜಾ ವಂದಿಸಿದರು.

