ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ಅಮ್ಟಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ತಾ.ಪಂ. ಸದಸ್ಯೆ ಮಲ್ಲಿಕಾ ವಿ ಶೆಟ್ಟಿ, ಉಪಾಧ್ಯಕ್ಷೆ ಯಶೋಧ, ಸಂಪನ್ಮೂಲ ವ್ಯಕ್ತಿಗಳಾದ ಗ್ರಾಮ ಕರಣಿಕ ಶಶಿಕುಮಾರ್, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಗ್ರಾ.ಪಂ. ಸದಸ್ಯರಾದ ಐರಿನ್ ಡಿ’ಸೋಜಾ, ಚಂದ್ರಾವತಿ, ರತಿ ಭಂಡಾರಿ ಮತ್ತು ಶ್ರೀಮತಿ, ಪಿಡಿಓ ರಾಜಶೇಖರ ರೈ, ಪ್ಲೇವಿ ಡಿ’ಸೋಜಾ, ವಸಂತಿ ದುರ್ಗಾನಗರ ಉಪಸ್ಥಿತರಿದ್ದರು.
