bjppಮಂಗಳೂರು: ದ.ಕ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋಚರ್ಾದ ವತಿಯಿಂದ ರಾಜ್ಯ ಸರಕಾರದ ವಸತಿ ಇಲಾಖೆಯಿಂದ ಬಡವರಿಗೆ ಆಗುವ ಅನ್ಯಾಯದ ವಿರುದ್ಧ ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ದಿನಾಂಕ 21.06.2014ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ನಡೆಯಲಿದೆ ಎಂದು ಬಿಜೆಪಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಬಿಜೆಪಿ ಹಿಂದುಳಿದ ವರ್ಗಗಳ ಮೋಚರ್ಾದ ರಾಜ್ಯಾಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರೂ ಆದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿಯ ಎಲ್ಲಾ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಎಂದು ದ.ಕ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಶ್ರೀ ಮೋಹನ್ರಾಜ್ ಕೆ.ಆರ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *