ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕುಕ್ಕಿಪಾಡಿ ಸಮೀಪದ ಏರೋಡಿ ಎಂಬಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ವ್ಯತ್ಯಯ ಉಂಟಾಗಿ ಇಲ್ಲಿನ ಸುಮಾರು 50ಕ್ಕೂ ಮಿಕ್ಕಿ ಮನೆಗಳಿಗೆ ಕತ್ತಲೆ ಆವರಿಸಿದೆ. ಇಲ್ಲಿನ ಕಡಿಮೆ ಸಾಮರ್ಥ್ಯ ಹೊಂದಿರುವ ವಿದ್ಯುತ್ ಪರಿವರ್ತಕ ತೆರವುಗೊಳಿಸಿ ಗುಣಮಟ್ಟದ ವಿದ್ಯುತ್ ಪೂರೈಸುವಂತೆ ಸಾಕಷ್ಟು ಬಾರಿ ಮೆಸ್ಕಾಂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಕಳೆದ ಮೂರು ದಿನಗಳಿಂದ ಮತ್ತೆ ವಿದ್ಯುತ್ ಸಮಸ್ಯೆ ತಲೆದೋರಿದ್ದು, ಈಗಾಗಲೇ ಲೈನ್ಮೆನ್ ಮಾತ್ರ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೂಡಲೇ ಮೆಸ್ಕಾಂ ಇಲಾಖೆ ಹಿರಿಯ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
