ಬೆಂಗಳೂರು: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಲಹೆ ನೀಡಿವೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆದ ಸರ್ವಪಕ್ಷ ಸಭೆಯಲ್ಲಿ ಹಾಜರಿದ್ದ ವಿಪಕ್ಷಗಳ ಮುಖಂಡರು, ವಿಧಾನ ಮಂಡಲದ ನಿರ್ಣಯಕ್ಕೆ ಬದ್ಧವಾಗಿರಲು ಸರ್ವಸಮ್ಮತಿ ಸೂಚಿಸಿದರು. ನಾಳೆಯವರೆಗೆ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಅಷ್ಟೇ ಅಲ್ಲ ಕಳೆದ ವಾರ ವಿಧಾನ ಮಂಡಲದಲ್ಲಿ ಕೈಗೊಂಡ ನಿರ್ಣಯಕ್ಕೆ ಬದ್ಧವಾಗಿರಬೇಕೆಂದು ಹೇಳಿವೆ.

