ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಇಲ್ಲಿನ ಶಾರದೋತ್ಸವ ಸಮಿತಿ ವತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವು ಅ.10ರಿಂದ 11ರತನಕ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನ ಬಳಿ ಸಂಭ್ರಮ ಸಡಗರದಿಂದ ನಡೆಯಲಿದೆ.

ಅ.10ರಂದು ಬೆಳಿಗ್ಗೆ ಧ್ವಜಾರೋಹಣ, ರಾಜಾರಾಮ್ ಭಟ್ ಅವರಿಂದ ಶ್ರೀ ಶಾರದಾ ಮೂರ್ತಿ ಪ್ರತಿಷ್ಠೆ , ಭಜನೆ, ಮಧ್ಯಾಹ್ನ ಮಹಾಪೂಜೆ, ಬಳಿಕ ಸರಪಾಡಿ ಅಶೋಕ ಶೆಟ್ಟಿ ಸಾರಥ್ಯದ ಯಕ್ಷ ಹಾಸ್ಯ ವೈಭವ, ಭಜನೆ, ಸಂಜೆ ಮಹಾಪೂಜೆ, ರಾತ್ರಿ ‘ಪೊರ್ಲು ತೂವೊಡ್ಚಿ’ ತುಳು ನಾಟಕ ನಡೆಯಲಿದೆ.

ಅ.11ರಂದು ಬೆಳಿಗ್ಗೆ ಪೂಜೆ, ಭಜನೆ, ಬಳಿಕ ಅದ್ವಿಕಾ ಶೆಟ್ಟಿ ಮತ್ತು ರಾಶಿ ರಾಜೇಶ್ ಶೆಟ್ಟಿ ಹಾಗೂ ಸ್ಥಳೀಯ ಕಲಾವಿದರಿಂದ ನೃತ್ಯ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.  ಅಂದು ಮಧ್ಯಾಹ್ನ ಧಾರ್ಮಿಕ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಅನಂತಪದ್ಮನಾಭ ಅಸ್ರಣ್ಣ ಆಶೀರ್ವಚನ ನೀಡುವರು. ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಪ್ರಧಾನ ಭಾಷಣ ಮಾಡಲಿದ್ದು, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಕೆ.ಪಿ.ಜಗದೀಶ್ ಅಧಿಕಾರಿ, ವಿಟ್ಲ ವೈದ್ಯೆ ಡಾ. ಗೀತಾ ಪ್ರಕಾಶ್, ಬಿ.ಜೆ.ಪಿ.ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ ಮತ್ತಿತರ ಗಣ್ಯರು ಭಾಗವಹಿಸುವರು. ಮಧ್ಯಾಹ್ನ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಯಕ್ಷ-ಗಾನ ನಾಟ್ಯ ವೈಭವ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ ತ್ರೀಶಾ ಮತ್ತು ಚಹನಾ ಅವರಿಂದ ಭರತನಾಟ್ಯ ಹಾಗೂ ವಿನುತಾ ಮತ್ತು ತಂಡದವರಿಂದ ನೃತ್ಯ ಕಾರ್ಯಕ್ರಮ ನಡೆದು ರಾತ್ರಿ ಶಾರದಾ ವಿಗ್ರಹ ಶೋಭಾಯಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *