ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯಟ್ ಸಂಭವಿಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಕಲ್ಲಡ್ಕ ಪೇಟೆಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯ ಸುಮಾರಿಗೆ ನಡೆದಿದೆ.

IMG-20140620-WA0012

IMG-20140620-WA0009

IMG-20140620-WA0011
ಮಂಚಿ ಸುರಿಬೈಲು ನಿವಾಸಿ ಅಬ್ದುಲ್ ಹಮೀದ್ (54) ಎಂಬವರಿಗೆ ಸೇರಿದ ಟಿ.ಎಫ್. ಸ್ಟೋರ್ ಅಂಗಡಿ ಬೆಂಕಿಗಾಹುತಿಯಾಗಿದ್ದು, ಸುಮಾರು 10 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಶುಕ್ರವಾರ ಮುಂಜಾನೆ 3 ರ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿದ್ದನ್ನು ಗಮನಿಸಿದ ರಾತ್ರಿ ವೇಳೆ ಕಾರ್ಯ ನಿರ್ವಹಿಸುವ ಕೆಲ ಸಾರ್ವಜನಿಕರು, ಅಕ್ಕಪಕ್ಕದ ನಿವಾಸಿಗಳು ಬೆಂಕಿಯನ್ನು ನಂದಿಸಲು ಯತ್ನಿಸಿದರಾದರೂ ಅದು ಸಫಲವಾಗಲಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

By Suddi9

Leave a Reply

Your email address will not be published. Required fields are marked *