ಮೂಡುಬಿದಿರೆ : ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಮೂಡುಬಿದಿರೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಬೆಟ್ಕೇರಿ ಹಿಂದೂ ರುಧ್ರಭೂಮಿ ಆವರಣದಲ್ಲಿ ಭಾನುವಾರ ಸ್ವಚ್ಛತಾ ಆಂದೋಲನ ನಡೆಯಿತು.
ಬಿಜೆಪಿ ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಸುದರ್ಶನ ಎಂ. ಆಂದೋಲನಕ್ಕೆ ಚಾಲನೆ ನೀಡಿದರು. ಮಂಡಲ ಸಮಿತಿಯ ಪ್ರ.ಕಾರ್ಯದರ್ಶಿ ಸುಕೇಶ್ ಶಿರ್ತಾಡಿ, ನಗರ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಮಲ್ಯ, ಪ್ರ.ಕಾರ್ಯದರ್ಶಿ ಹರೀಶ್ ಎಂ.ಕೆ, ಯುವ ಮೋರ್ಚಾದ ಅಧ್ಯಕ್ಷ ಅಮರ್ ಕೋಟೆ ಈ ಸಂಧರ್ಭದಲ್ಲಿ ಪಾಲ್ಗೊಂಡಿದ್ದರು.

