ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲಿಯನಡುಗೋಡು ಮೂಡುಪಡ್ಜಾಲ್ ಎಂಬಲ್ಲಿ ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.

crime

ಮೃತರನ್ನು ಸ್ಥಳೀಯ ರಾಯಿ ಬುರಾಲ್ ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಜನಾರ್ದನ ಪೂಜಾರಿ (48) ಎಂದು ಗುರುತಿಸಲಾಗಿದೆ. ಕೆಲವು ಸಮಯದಿಂದ ಮಾನಸಿಕ ಅಸ್ವಸ್ಥರಾಗಿದ್ದ ಇವರು ಸೋಮವಾರ ಬೆಳಿಗ್ಗೆ ಕೃಷಿ ಚಟುವಟಿಕೆ ವೇಳೆ ಕೆರೆಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದು, ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಇದ್ದಾರೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *