ಕೈಕಂಬ: ಬುಧವಾರದಂದು ಮುಳುಗಡೆ ಭಾಗದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಹೋರಾಟ ಸಮಿತಿ ವತಿಯಿಂದ ಸಂತ್ರಸ್ತ ರೈತರು ಹಾಗೂ ಸಾರ್ವಜನಿಕರು ಸಾಮೂಹಿಕ ಪ್ರಾರ್ಥನೆಯ ಮೂಲಕ ತಮ್ಮ ಬೇಡಿಕೆ ಈಡೇರಿಸಲು ದೇವರ ಮೊರೆ ಹೋಗಲು ಮುಂದಾಗಿದ್ದರು. ಆದರೆ ಅನಿವಾರ್ಯ ಕಾರಣದಿಂದ ಬುಧವಾರದ ಸಾಮೂಹಿಕ ಪ್ರಾರ್ಥನೆಯನ್ನು ರದ್ದುಗೊಳಿಸಿದ್ದು ಗುರುವಾರದಂದು ಶ್ರೀ ಕ್ಷೇತ್ರ ಮಿತ್ತಮಜಲಿನಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುವುದು ಎಂದು ಹೋರಾಟ ಸಮಿತಿಯ ಪ್ರ. ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.
