ವಿಟ್ಲ: ಲಯನ್ಸ್, ಲಯನೆಸ್, ಲಿಯೋ ಕ್ಲಬ್ ವಿಟ್ಲ, ಪಟ್ಟಣ ಪಂಚಾಯತ್ ವಿಟ್ಲ, ಮತ್ತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನ ಮತ್ತು ಜಾಗೃತಿ ಕಾರ್ಯಕ್ರಮ ಅ.5ರಂದು ನಡೆಯಿತು. ವಿಟ್ಲ ಜೈನ ಬಸದಿಯಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾತಾವು ರಸ್ತೆಯ ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್ ಮತ್ತು ಸದಸ್ಯರು, ಲಯನೆಸ್ ಅಧ್ಯಕ್ಷೆ ಲೀನಾ ಮತ್ತು ಸದಸ್ಯರು, ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಮತ್ತು ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

