ವಿಟ್ಲ:ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ವಿಟ್ಲ ಜೇಸಿಐ ನ ನಿಕಟ ಪೂರ್ವ ಅಧ್ಯಕ್ಷ ನ್ಯಾಯವಾದಿ ಮೋಹನ ಮೈರ ಮಾಹಿತಿ ನೀಡಿದರು.

1

ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಲಯನೆಸ್ ಕ್ಲಬ್ ಅಧ್ಯಕ್ಷೆ ಲೀನಾ, ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್, ಸದಸ್ಯರುಗಳಾದ ಮನೋಜ್, ಖಲಂದರ್, ಲಯನ್ ಜಿಲ್ಲಾ ಕಾನೂನು ವಿಭಾಗದ ಚೈರ್ ಪರ್ಸನ್ ಅಬೂಬಕ್ಕರ್ ಮತ್ತು ಮಕ್ಕಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *