ಪರಿಸರ ಸಂರಕ್ಷಣೆ: 

ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೆ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ.

enviromental
modi-plantation

ನಿಸರ್ಗದ ಜೊತೆ ಬೆರೆತು ಬಾಳಿದರೆ ಪರಿಸರದ ಮೇಲೆ ದುಷ್ಪರಿಣಾಮ ಬೀರುವ, ಪರಿಸರದ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ. ಆದರೆ ಅದು ಅಷ್ಟು ಸುಲಭವಲ್ಲ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಆವಿಷ್ಕರದಿಂದ ಇಂದಿನ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಇದರಿಂದ ಹೆಚ್ಚಿನ ಮನುಷ್ಯರು ಪ್ರಕೃತಿಯಿಂದ ದೂರಾಗಿ ವಿವಿಧ ಅನೈಸರ್ಗಿಕ ಚಟುವಟಿಕೆಗಳಲ್ಲಿ ಕಾಲಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

nd06-p2-a-obser_de_2429685f

ಮನುಷ್ಯನ ಉದಾಸೀನತೆ, ತಿಳಿಗೇಡಿತನದಿಂದ ನಿಸರ್ಗ ಬಸವಳಿಯುತ್ತಾ ಸಾಗುತ್ತಿದೆ, ಈ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗೀದಾರರು ಎಂಬುದು ಕೂಡ ನಮಗೆಲ್ಲರಿಗೂ ಈಗ ಚೆನ್ನಾಗಿ ಗೊತ್ತಾಗಿರುವ ಸತ್ಯ. ಈ ಬಗ್ಗೆ ಕಾಳಜಿ, ಚಿಂತೆ ಇರುವವರನ್ನೂ ಗಾಢವಾಗಿ ಕಾಡುತ್ತಿರುವ ಪ್ರಶ್ನೆ ಎಂದರೆ – ಈ ನಿಟ್ಟಿನಲ್ಲಿ ನಾವೇನು ಮಾಡಬಹುದು?

environmental-protection-326923_960_720

ಪರಿಸರದ ಸಂರಕ್ಷಣೆ ಬಗ್ಗೆ ಗಮನಿಸಬೇಕಾದ ಅಂಶಗಳು
* ಜನಸಂಖ್ಯೆ – ಹೆಚ್ಚಳ-ಕಡಿತ ಹಾಗೂ ಅವರ ಒಟ್ಟಾರೆ ಬೇಡಿಕೆಯ ಮೇಲಿನ ಪರಿಣಾಮ
* ಆಹಾರ, ಕೃಷಿ – ಕೀಟನಾಶಕಗಳ ಬಳಕೆ, ಸಾವಯವ ಕೃಷಿಯ ಬೆಳವಣಿಗೆ, ಪ್ರಾಣಿಮೂಲ ಆಹಾರದಿಂದ ಪರಿಸರಕ್ಕೆ ಆಗುವ ಆಘಾತ
* ಜನರು, ಸಂಘ-ಸಂಸ್ಥೆಗಳು – ಪರಿಸರಕ್ಕೆ ಅವರ ಕೊಡುಗೆಗಳು, ಪಾತ್ರ ಹಾಗೂ ಅವರ ನೈಜ ಉದ್ದೇಶಗಳು
* ತ್ಯಾಜ್ಯ – ಉತ್ಪಾದನೆ, ಸಂಸ್ಕರಣೆ ಹಾಗೂ ವಿಲೇವಾರಿ
* ನೀರು – ಬಳಕೆಯ ಪ್ರಮಾಣ, ಮಳೆನೀರಿನ ಇಂಗುವಿಕೆಯ ಪ್ರಮಾಣ, ವಿವಿಧ ಮೂಲಗಳ ಸ್ಥಿತಿಗತಿ
* ಸ್ಥಳೀಯ ಸಂಸ್ಕೃತಿ, ಹಿರಿಯರ ಜೀವನಕ್ರಮ – ಅದರಲ್ಲಿರುವ ಒಳಿತು-ಕೆಡುಕುಗಳು (ಪರಿಸರದ ದೃಷ್ಟಿಯಿಂದ)
* ಇಂಧನ-ಶಕ್ತಿ – ಬಳಕೆಯ ಪ್ರಮಾಣ, ನವೀಕರಣಗೊಳ್ಳುವ ಮೂಲಗಳ ಶೇಕಡಾವಾರು ಕೊಡುಗೆ
* ನೆಲ – ಬಳಕೆಯಲ್ಲಿ ಆಗುತ್ತಿರುವ ವ್ಯತ್ಯಾಸಗಳು – ಕಾಡು ಕೃಷಿಭೂಮಿಯಾಗುವುದು, ಕೃಷಿಭೂಮಿ ನಿವೇಶನಗಳಾಗುವುದು.
* ಆರ್ಥಿಕತೆ – ಏರಿಳಿತದಿಂದ ಜನರ ಜೀವನಶೈಲಿ, ಅವರ ಬೇಡಿಕೆಗಳು ಹಾಗೂ ಪರಿಸರದ ಮೇಲೆ ಆಗುವ ಪರಿಣಾಮ.
* ಸ್ಥಳೀಯ ಪ್ರಾಣಿ-ಪಕ್ಷಿ-ಜಲಚರಗಳು – ಅವುಗಳ ಜೀವನಕ್ರಮ, ಅವುಗಳ ಉಳಿವಿಗೆ ಅವಶ್ಯವಾದ ಪರಿಸರ
* ಸಾಧ್ಯವಾದಾಗಲೆಲ್ಲಾ ರಾಸಾಯನಿಕ ಮುಕ್ತ, ಸಾವಯವ ಹಾಗೂ ಸಸ್ಯಮೂಲದ ಆಹಾರ ಪದಾರ್ಥಗಳನ್ನೇ ಖರೀದಿಸಿರಿ. ಇದರಿಂದ ಪರಿಸರಕ್ಕೂ ನಿರಾಳ, ನಿಮ್ಮ ಆರೋಗ್ಯಕ್ಕೂ ವರದಾನ.
* ಸುತ್ತಮುತ್ತಲೂ ಹಸಿರು ಹೆಚ್ಚುವಂತೆ ಪ್ರಯತ್ನ ಮಾಡಿ. ನಿಮ್ಮ ಹುಟ್ಟುಹಬ್ಬದಂದು, ಇತರ ವಿಶೇಷ ದಿನಗಳಂದು ಗಿಡ ನೆಡುವ ಕಾರ್ಯ ಕೈಗೊಳ್ಳಿ, ಅದನ್ನು ನೀರೆರೆದು ಪೋಷಿಸಲು ಮರೆಯಬೇಡಿ.
* ಇಂಗು ಗುಂಡಿಗಳನ್ನು ಸ್ಥಾಪಿಸಿ. ಮನೆಯ ಸುತ್ತಮುತ್ತಲೂ ಹರಿದು ಪೋಲಾಗಿಹೋಗುವ ಮಳೆನೀರನ್ನು ಇಂಗಿಸಲು ವ್ಯವಸ್ಥೆ ಕಲ್ಪಿಸಲು ಸಾಧ್ಯವಾದರೆ ಮಾಡಿ.
ಹೆಚ್ಚಿಗೆ ಮಾಡಬಹುದಾದ ಸಂಗತಿಗಳು
* ಸಸ್ಯಜನ್ಯ ಆಹಾರಕ್ಕೆ ಹೆಚ್ಚಿನ ಒತ್ತುಕೊಡಿ.
* ನಿಮ್ಮ ಜನಪ್ರತಿನಿಧಿಗಳನ್ನು ಪರಿಸರ ಪ್ರೇಮಿಗಳಾಗಲು ಒತ್ತಾಯಿಸಿ

By Suddi9

Leave a Reply

Your email address will not be published. Required fields are marked *