ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಸಮೀಪದ ನೆಟ್ಲ ಎಂಬಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

hang_650x488_41438207204

ಮೃತರನ್ನು ಇಲ್ಲಿನ ನಿವಾಸಿ ಪುರುಷೋತ್ತಮ ದೇವಾಡಿಗ ಎಂಬವರ ಪತ್ನಿ ಲೀಲಾವತಿ(36) ಎಂದು ಗುರುತಿಸಲಾಗಿದ್ದು, ಇವರು ಗುರುವಾರ ಬೆಳಿಗ್ಗೆ ಮನೆ ಪಕ್ಕದಲ್ಲಿರುವ ಶೆಡ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದಾರೆ.

ಮಂಗಳೂರು ತಾಲ್ಲೂಕಿನ ಕಾವೂರು ನಿವಾಸಿ ರಘು ದೇವಾಡಿಗ ಎಂಬವರ ಪುತ್ರಿಯಾಗಿರುವ ಈಕೆಯನ್ನು ಕಳೆದ 14 ವರ್ಷಗಳ ಹಿಂದೆ ಟೈಲ್ಸ್ ಅಳವಡಿಸುವ ಕೆಲಸ ಮಾಡಿಕೊಂಡಿರುವ ಪುರುಷೋತ್ತಮ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಈಕೆ ಆಶಾ ಕಾರ್ಯಕರ್ತೆಯಾಗಿ ದುಡಿಯುತ್ತಿರುವ ಬಗ್ಗೆ ಪತಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಸ್ವತಃ ಲೀಲಾವತಿ ಅವರು ತನ್ನ ತಂದೆಗೆ ದೂರವಾಣಿ ಕರೆ ಮೂಲಕ ಹೇಳಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇವರ ಇಬ್ಬರು ಹೆಣ್ಣು ಮಕ್ಕಳು ದಸರಾ ರಜೆ ಹಿನ್ನೆಲೆಯಲ್ಲಿ ಕಾವೂರಿನ ಅಜ್ಜಿಯ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *