ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಮಂಗಳವಾರ ಆಚರಿಸಲಾಯಿತು. ಸಾಹಿತಿ ಶ್ರೀಧರ್ ಡಿ.ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕನ್ನಡ ನಾಡು ನುಡಿಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು.

mbd_nov1-7

ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ತ ಮಾತನಾಡಿ ಮಕ್ಕಳಿಗೆ ಆಂಗ್ಲ ಭಾಷೆಯಷ್ಟೇ ಮಾನ್ಯತೆ ಕನ್ನಡಕ್ಕೂ ನೀಡಬೇಕೆಂದು ಹೇಳಿದರು. ಸಂಸ್ಥೆಯ ಆಡಳಿತಾಧಿಕಾರಿ ಶುಭಕರ್ ಅಂಚನ್, ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ವಿಧ್ಯಾರ್ಥಿನಿ ಅಂಜನಾ ಪೈ ಸ್ವಾಗತಿಸಿದರು. ಗಾನ ಶ್ರೀ ಕನ್ನಡದ ಮಹತ್ವದ ಬಗ್ಗೆ ಮಾತನಾಡಿದರು. ಶ್ರುತಿ ವಂದಿಸಿದರು, ನಿಶಿಕಾ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *