ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ, ಸರಕಾರಿ ಪ್ರೌಢ ಶಾಲೆ ಕೊಯಿಲ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ  2016-17ರ ಕ್ರೀಡಾಕೂಟ  ಬಂಟ್ವಾಳ ತಾಲೂಕು ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ನ.8ಮತ್ತು ನ.9 ರಂದು ಜರಗಲಿದೆ.

sports_logo_desing_by_eda2z

ನ.8ರಂದು ಬೆಳಗ್ಗೆ ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಕ್ರೀಡಾ ಕೂಟವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಧ್ವಜಾರೋಹಣ ನಡೆಸಲಿರುವರು. ಶಾಸಕಿ ಶಕುಂತಲಾ ಶೆಟ್ಟಿ ಅವರು ಕ್ರೀಡಾಜ್ಯೋತಿ ಬೆಳಗಿಸಲಿರುವರು.ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ,ಸಂಗಬೆಟ್ಟು ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ,ರಾಯಿ ತಾ.ಪಂ.ಸದಸ್ಯೆ ಮಂಜುಳಾ ಸದಾನಂದ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ನ.9ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ಜರಗಲಿರುವುದು. ರಾಯಿ ಗ್ರಾ,ಪಂ.ಅಧ್ಯಕ್ಷ ದಯಾನಂದ ಸಪಲ್ಯ ಅವರು ಸಭಾಧ್ಯಕ್ಷತೆ ವಹಿಸಲಿರುವರು. ಉಪಾಧ್ಯಕ್ಷೆ ಪುಷ್ಪಲತಾ,ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್,ರಾಯಿ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋಪಿನಾಥ್ ರೈ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *