ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಡಗ ಕಜೆಕಾರು ಗ್ರಾಮ ಪಂಚಾಯಿತಿಗೆ ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಕಾರ್ಯದರ್ಶಿ ನೇಮಕಗೊಳಿಸಬೇಕು ಎಂದು ಪಂಚಾಯಿತಿ ಸದಸ್ಯ ಮುಹಮ್ಮದ್ ಅತಾವುಲ್ಲಾ ಆಗ್ರಹಿಸಿದ್ದಾರೆ. ಈ ಬಗ್ಗೆ ಈಗಾಗಲೇ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
