ಉಳ್ಳಾಲ: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲದೆ ಬೀಗ ಹಾಕುತ್ತಿದ್ದು, ಇಂತಹ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಸರಕಾರಿ ಶಾಲೆಗಳ ಜೊತೆ ಕೈ ಜೋಡಿಸಿದರೆ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಸೋಮೇಶ್ವರ ಗ್ರಾ.ಪಂ ಅಧ್ಯಕ್ಷ ರಾಜೇಶ್ ಉಚ್ಚಿಲ್ ಅಭಿಪ್ರಾಯಪಟ್ಟರು.

ಅವರು ಮಂಗಳೂರಿನ ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಸರಕಾರಿ ಪ್ರಾರ್ಥಮಿಕ ಶಾಲೆಗಳಲ್ಲಿ ನ, 3ರಿಂದ ನ,4ರ ವರೆಗೆ ನಡೆಯುವ ಕಲರವ2016 ಕಾರ್ಯಕ್ರಮದ ಉದ್ಘಾಟನೆ ಪಿಲಾರ್ ಸರಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಉತ್ತಮ ಹೆಜ್ಜೆಯನ್ನಿಟ್ಟಿದೆ. ಇಂತಹ ಸಂಘ ಸಂಸ್ಥೆಗಳು ಹೆಚ್ಚು ಹೆಚ್ಚು ಹುಟ್ಟಿ ಬರಲಿ ಎಂದು ಆಶಿಸಿದರು.

ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪನಾ ಅಧ್ಯಕ್ಷತೆ ಗೀತಾ ಉಚ್ಚಿಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳು ಮುಚ್ಚಿತ್ತಿದ್ದು ಸರಕಾರಿ ಶಾಲೆಗೆ ಮಕ್ಕಳನ್ನು ಆರ್ಕಷಿಸಲು ಇಂತಹ ಕಾರ್ಯಕ್ರಮಗಳು ಅಗತ್ಯವಿದ್ದು ಜನನಿ ಸಂಸ್ಥೆ ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಕಲಿಕ ವಿಶೇಷ ತರಬೇತಿ ಆರಂಭಿಸಲಾಗುವುದು ಎಂದು ಹೇಳಿದರು.

ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷೆ ಶರ್ಮಿಳಾ ದಿಲೀಪ್ ಪ್ರಾಸ್ತಾವಿಕವಾಗಿ ಮಾತನಾಡಿ. ಜನನಿ ಸಂಸ್ಥೆ 3ವರ್ಷಗಳ ಹಿಂದೆ ಹುಟ್ಟಿದ್ದು ಮೂರು ವರ್ಷದಲ್ಲಿ ನಿರಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದು, ಮುಂದಿನ ದಿನಗಳಲ್ಲಿ ಬಡ ವಿದ್ಯಾರ್ಥಿನಿಗಳನ್ನು ದತ್ತು ಸ್ವೀಕಾರ ಮತ್ತು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಶಾಲೆಯ, ತರಗತಿಯ ಕಾರ್ಯಕ್ರಮ ಹಮ್ಮಿಕೊಂಡಿದೆವೆ ಎಂದು ಹೇಳಿದರು.
ಈ ಸಂದರ್ಭ ಹಿಂದುಳಿತ ವರ್ಗಗಳ ಪ್ರ.ಕಾರ್ಯದರ್ಶಿ ಮೋಹನ್ ಮೆಂಡನ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್‍ನ ಉಪಾಧ್ಯಕ್ಷ ಪಿಯೂಷ್ ಮೊಂತೆರೊ, ಲಯನ್ಸ್ ಕ್ಲಬ್ ಉಳ್ಳಾಲ ವಲಯಾಧ್ಯಕ್ಷ ರಾಜೇಶ್ ಶೆಟ್ಟಿ ಉಪಸ್ಥಿತರಿದರು. ಪಿಲಾರ್ ಶಾಲೆಯ ಮುಖ್ಯ ಶಿಕ್ಷಕ ರೋಹಿತಾಶ್ವ ಸ್ವಾಗತಿಸಿ. ಸಿ.ಆರ್.ಪಿ ಕವಿತಾ ವಂದಿಸಿದರು. ಕೊಣಾಜೆ ಪದವಿನ ಸಿ.ಆರ್.ಪಿ ಸುಗುಣ ಕಾರ್ಯಕ್ರಮ ನಿರೂಪಿಸಿದರು.
