ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜರಗಿದ ಕನ್ನಡರಾಜ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಶ್ರೀ ಬಿ. ಎಂ. ಇಚ್ಲಂಗೋಡು ಅವರನ್ನು ಸನ್ಮಾನಿಸಲಾಯ್ತು. ಈ ಸಂದರ್ಭ ಹೊರನಾಡು, ಕಾಸರಗೋಡು ಮತ್ತು ಸ್ಥಳೀಯ ಪ್ರತಿಭೆಗಳನ್ನು ಪರಿಷತ್ ವತಿಯಿಂದ ಅಭಿನಂದಿಸಲಾಯ್ತು.
ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್, ತಹಸೀಲ್ದಾರ್ ಮಹಾದೇವಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಾಲ್ಟರ್ಡೆಮೆಲ್ಲೊ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯಕೆ.ಆರ್., ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರಘಟಕದ ಸುರೇಶ್ ಶೆಟ್ಟಿಯೆಯ್ಯಾಡಿ, ಕೇರಳ ಗಡಿನಾಡ ಘಟಕದ ಪದಾಧಿಕಾರಿ ಕೇಳು ಮಾಸ್ಟರ್ ಅಗಲ್ಪಾಡಿ, ಕೇರಳ ಗಡಿನಾಡ ಘಟಕದ ಅಧ್ಯಕ್ಷ ಕೇಶವಪ್ರಸಾದ ನಾಣಿತ್ತಿಲು, ಕೊಂಕಣಿ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ, ಸದಸ್ಯ ಲಾರೆನ್ಸ್, ಕೆನರಾ ಪ್ರೌಢಶಾಲೆ ಉರ್ವ ಮುಖ್ಯೋಪಾಧ್ಯಾಯಿನಿ ಶುಭಾ ಭಟ್, ಪೊಳಲಿ ನಿತ್ಯಾನಂದ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

