ಬಂಟ್ವಾಳ: ನೂತನ ತುಂಬೆ ಡ್ಯಾಂನಿಂದ ಮುಳುಗಡೆ ಪ್ರದೇಶದ ಬಗ್ಗೆ ಸ್ಪಷ್ಟ ಲಿಖಿತ ಪಾರದರ್ಶಕ ಮಾಹಿತಿ ನೀಡುವಂತೆ ದ.ಕ.ಜಿಲ್ಲಾಧಿಕಾರಿಗಳಿಗೆ ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಪ್ರದಾನ ಕಾರ್ಯದರ್ಶಿ ಅವರು ಲಿಖಿತ ಮನವಿ ನೀಡಿರುವುದಕ್ಕೆ ಸ್ಪಂದಿಸಿ ದ.ಕ.ಜಿಲ್ಲಾಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಸಂತ್ರಸ್ತ ರೈತರಿಗೆ ಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

dam-01

ಮನವಿಗೆ ಸ್ಪಂದಿಸಿದ ದ.ಕ.ಜಿಲ್ಲಾಧಿಕಾರಿ ಕೆ,ಜಿ.ಜಗದೀಶ್ ಅವರಿಗೆ ಸಂತ್ರಸ್ತ ರೈತರ ಹೋರಾಟ ಸಮಿತಿ ಪ್ರದಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ಭಟ್ ಅವರು ಕೃತಜ್ಞತೆ ಸಲ್ಲಿಸಿ 12 ವರ್ಷಗಳ ಈ ನೆನಗುದಿಗೆ ಬಿದ್ದಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಒದಗಿಸಿ ರೈತರ ಹಿತಾಶಕ್ತಿ ಕಾಪಾಡುವಂತೆ ಒತ್ತಾಯಿಸಿದ್ದಾರೆ.

By suddi9

Leave a Reply

Your email address will not be published. Required fields are marked *