ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಷಣ್ಮುಖ ಕಲಾ ತಂಡ ಇದರ ವತಿಯಿಂದ 50ನೇ ಕಲಾ ಪ್ರದರ್ಶನ ಪ್ರಯುಕ್ತ ಕೈತ್ರೋಡಿ ಕ್ವಾರ್ಟರ್ಸ್ ಮೈದಾನದಲ್ಲಿ ಇದೇ 5ರಂದು ಬೆಳಿಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಾತ್ರಿ ಗಂಟೆ 6ರಿಂದ ‘ಷಣ್ಮುಖ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ಗಂಟೆ 9ರಿಂದ ಮಧ್ಯಾಹ್ನ 1ಗಂಟೆ ತನಕ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ಕೆ.ಸಂತೋಷ್ ಕುಮಾರ್ ಭಂಡಾರಿ ಸ್ಮರಣಾರ್ಥ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ ಆಯೋಜಿಸಲಾಗಿದೆ. ಸಂಜೆ ಗಂಟೆ 6ರಿಂದ ತಂಡದ ಸದಸ್ಯರಿಂದ ‘ಐಸಿರದ ರಂಗ್ ರಂಗಿತದ ಲೇಸ್’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ರಾತ್ರಿ ಗಂಟೆ 7.30ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಉಪನ್ಯಾಸಕ ಅಕ್ಷಯ ಗೋಖಲೆ ಕಾರ್ಕಳ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಲಯನ್ಸ್ ಪ್ರಾಂತೀಯ ಮಾಜಿ ಅಧ್ಯಕ್ಷ ಎಂ.ದೇವಪ್ಪ ಶೆಟ್ಟಿ ಮಾವಂತೂರು, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಸದಾನಂದ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

